ಕರ್ನಾಟಕ

karnataka

By

Published : Jan 5, 2020, 4:00 PM IST

ETV Bharat / state

ಪೌರತ್ವ ಕಾಯ್ದೆ ಬೆಂಬಲಿಸಿ ಕೊಪ್ಪಳದಲ್ಲಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಸಚಿವ ಸಿ. ಸಿ. ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಜನಜಾಗೃತಿ ಅಭಿಯಾನ ನಡೆಸಿದ್ರು.

bjp-campaigns-for-citizenship-act
ಪೌರತ್ವ ಕಾಯ್ದೆ ಬೆಂಬಲಿಸಿ ಜನಜಾಗೃತಿ ಅಭಿಯಾನ ನಡೆಸಿದ ಬಿಜೆಪಿ

ಕೊಪ್ಪಳ: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಸಚಿವ ಸಿ.ಸಿ. ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಜನಜಾಗೃತಿ ಅಭಿಯಾನ ನಡೆಸಿದ್ರು.

ಸಂಸದ ಸಂಗಣ್ಣ ಕರಡಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಕುಡಚಿ ಶಾಸಕ ಪಿ. ರಾಜೀವ್ ಹಾಗೂ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮನೆ, ಅಂಗಡಿಗಳಿಗೆ ತೆರಳಿ ಸಿಎಎ ಕುರಿತು ಮನವರಿಕೆ ಮಾಡಿದರು.

ಪೌರತ್ವ ಕಾಯ್ದೆ ಬೆಂಬಲಿಸಿ ಜನಜಾಗೃತಿ ಅಭಿಯಾನ ನಡೆಸಿದ ಬಿಜೆಪಿ

ನಂತರ ಮಾತನಾಡಿದ ಸಚಿವ ಸಿ.ಸಿ. ಪಾಟೀಲ್, ಸಿಎಎ ಕಾಯ್ದೆ ವಿರೋಧಿಸಿ ಮಂಗಳೂರು ಮತ್ತು ಇತರೆಡೆ ನಡೆದ ಗಲಭೆಗೆ ಕಾಂಗ್ರೆಸ್ ಪಕ್ಷದ ಪ್ರಚೋದನೆ ಕಾರಣ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಕಾಯ್ದೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೊಳಗಾದ ಅಲ್ಲಿನ ಅಲ್ಪಸಂಖ್ಯಾತರಿಗೆ ನಮ್ಮ ದೇಶಕ್ಕೆ ಬಂದರೆ ಪೌರತ್ವ ಕೊಡುತ್ತದೆ ಎಂದರು.

ಇನ್ನು, ಕಾಂಗ್ರೆಸ್ ಪಕ್ಷದವರು ಕಾಯ್ದೆಯನ್ನು ಅರ್ಥಮಾಡಿಕೊಳ್ಳದೆ ಒಂದು ಜನಾಂಗವನ್ನು ಎತ್ತಿಕಟ್ಟುವ ಕೆಲಸ ಮಾಡಿದೆ ಎಂದು ಆರೋಪಿಸಿದರು. ಇನ್ನು ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಪ್ರಚೋದನಾತ್ಮಕ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಸಚಿವ ಪಾಟೀಲ್​ ಅವರು ಸೋಮಶೇಖರರೆಡ್ಡಿ ಅವರ ಭಾಷಣದ ಸಂಪೂರ್ಣ ವಿವರವ್ನನು ನಾನು ಕೇಳಿಲ್ಲ. ಯಾರೇ ಆಗಿರಲಿ ಜವಬ್ದಾರಿಯುತ ಸ್ಥಾನದಲ್ಲಿರುವವರು ಪ್ರಚೋದನಾತ್ಮಕ ಹೇಳಿಕೆ ನೀಡಬಾರದು. ಈ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ರು.

ABOUT THE AUTHOR

...view details