ಕುಷ್ಟಗಿ(ಕೊಪ್ಪಳ):ಲಂಬಾಣಿ, ಬೋವಿ ಇತರೆ ಸಮುದಾಯಗಳಿಗೆ ಅನ್ಯಾಯವಾಗದಂತೆ ನ್ಯಾ. ಏ ಜೆ ಸದಾಶಿವ ಆಯೋಗದ ವರದಿ ಜಾರಿಗೆ ಬಿಜೆಪಿ ಬದ್ಧವಾಗಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕೇಂದ್ರ ಸಚಿವ ನಾರಾಯಣಸ್ವಾಮಿ ಹೇಳಿದರು.
ನಾರಾಯಣಸ್ವಾಮಿ ಅವರು ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ತಾಲೂಕಿಗೆ ಭೇಟಿ ನೀಡಿದ್ದರು. ಈ ವೇಳೆ ಮಾದಿಗ ಸಮುದಾಯ ಹಾಗೂ ಬಿಜೆಪಿ ಕಾರ್ಯಕರ್ತರು ಸಚಿವ ನಾರಾಯಣಸ್ವಾಮಿ ಅವರನ್ನು ಪುಷ್ಪವೃಷ್ಟಿಯ ಮೂಲಕ ಬರಮಾಡಿಕೊಂಡರು.
ಇಲ್ಲಿನ ಮೇಲ್ಸೇತುವೆ ವೀಕ್ಷಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾಶಿವ ಆಯೋಗದ ವರದಿ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದಿದೆ. ನ್ಯಾಯಯುತ ದಿಕ್ಕಿನಲ್ಲಿ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದೆ.