ಕುಷ್ಟಗಿ(ಕೊಪ್ಪಳ):ಕರ್ನಾಟಕ ಜನ ಸಂಪರ್ಕ ರ‍್ಯಾಲಿಯ ಸಮಾರೋಪ ಸಮಾರಂಭ ಹಾಗೂ ಜನ ಸಂವಾದ ಕಾರ್ಯಕ್ರಮದ ನೇರಪ್ರಸಾರವನ್ನು ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ವೀಕ್ಷಿಸಲಾಯಿತು.
ಈ ವೇಳೆ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಮಾತನಾಡಿ, ಕೊರೊನಾ ಸೋಂಕು ಈಗಾಗಲೇ ಸಮುದಾಯಕ್ಕೆ ಹಬ್ಬುವ ಆತಂಕ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಕಾರ್ಯಕರ್ತರು ವೈಯಕ್ತಿಕವಾಗಿ ಸ್ವಚ್ಚತೆ ಕಾಪಾಡಿಕೊಳ್ಳುತ್ತ ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.