ಕೊಪ್ಪಳ: ಜಿಲ್ಲಾ ಉಸ್ತುವಾರಿ ಸಚಿವ ಬಿ. ಪಾಟೀಲ್ ಅವರು ಇಂದು ನಡೆಸಿದ ಕೆಡಿಪಿ ಸಭೆಯನ್ನು ಜಿಲ್ಲೆಯ ಬಿಜೆಪಿ ಶಾಸಕರು ಬಹಿಷ್ಕರಿಸಿದರಾ? ಎಂಬ ಅನುಮಾನ ವ್ಯಕ್ತವಾಗಿದೆ. ಜಿಲ್ಲೆಯ ಮೂವರು ಬಿಜೆಪಿ ಶಾಸಕರು ಸಭೆಗೆ ಗೈರು ಹಾಜರಾಗಿದ್ದರಿಂದ ಈ ಅನುಮಾನ ಮೂಡಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಜಿಲ್ಲೆಯ ಮೂವರು ಬಿಜೆಪಿ ಶಾಸಕರ ಮಧ್ಯೆ ಮುನಿಸು ಉಂಟಾಗಿದೆ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿರುವ ನಡುವೆಯೇ ಕೆಡಿಪಿ ಸಭೆಗೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಹಾಗೂ ಯಲಬುರ್ಗಾ ಹಾಲಪ್ಪ ಆಚಾರ್ ಗೈರು ಹಾಜರಾಗಿದ್ದರು.