ಗಂಗಾವತಿ(ಕೊಪ್ಪಳ):ನಿವೇಶನಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ ಮಧ್ಯೆ ಮಾತಿನ ಚಕಮಕಿ ನಡೆದು ತನ್ನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಹಿಳಾ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷೆ ಪುಷ್ಪಾಂಜಲಿ ಗುನ್ನಾಳ, ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವಿರುಪಾಪುರದ ತಮ್ಮ ಪ್ಲಾಂಟಿನಲ್ಲಿದ್ದ ಕಲ್ಲುಗಳನ್ನು ತೆರವು ಮಾಡುತ್ತಿರುವ ಸಂದರ್ಭದಲ್ಲಿ ಗುಂಪು ಕಟ್ಟಿಕೊಂಡು ಬಂದ ಒಂದಿಷ್ಟು ಜನ, ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಒಟ್ಟು 12 ಜನರ ಮೇಲೆ ದೂರು ದಾಖಲಿಸಿದ್ದಾರೆ. ದಾನಪ್ಪ, ಗಿರಿಜಮ್ಮ, ಶರಣಮ್ಮ, ಉಮಾದೇವಿ, ಅಮರೇಶ, ಸಂಜಯ್, ಸೋಮಶೇಖರ ಎಂಬುವವರ ಮೇಲೆ ಐಪಿಸಿಯ ವಿವಿಧ ಕಲಂಗಳ ಮೇಲೆ ಪ್ರಕರಣ ದಾಖಲಾಗಿದೆ.