ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ವರುಣನ ನರ್ತನ: ಕೊಚ್ಚಿಹೋಯ್ತು ನಿರ್ಮಾಣ ಹಂತದ ಬನ್ನಟ್ಟಿ ಸೇತುವೆ - ನಿರ್ಮಾಣದ ಹಂತದಲ್ಲಿದ್ದ ಸೇತುವೆ ಕೊಚ್ಚಿ ಹೋಗಿದೆ

ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಿನ್ನೆಲೆ ಬನ್ನಟ್ಟಿ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕೊಚ್ಚಿ ಹೋಗಿದೆ.

ಕೊಚ್ಚಿ ಹೋದ ನಿರ್ಮಾಣ ಹಂತದ ಸೇತುವೆ

By

Published : Sep 26, 2019, 5:25 PM IST

ಕೊಪ್ಪಳ:ನಿನ್ನೆ ಸುರಿದ ಮಳೆಯಿಂದಾಗಿ ನಿರ್ಮಾಣದ ಹಂತದಲ್ಲಿದ್ದ ಸೇತುವೆಯೊಂದು ಕೊಚ್ಚಿ ಹೋಗಿದೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ಬನ್ನಟ್ಟಿ ಗ್ರಾಮದ ಬಳಿ ಸುಮಾರು 5 ಕೋಟಿ‌ ರುಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯ ಪರಿಣಾಮ ಹಳ್ಳಕ್ಕೆ ವ್ಯಾಪಕವಾಗಿ ನೀರು ಹರಿದು ಬಂದಿತ್ತು, ನೀರಿನ ರಭಸಕ್ಕೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕೊಚ್ಚಿಕೊಂಡು ಹೋಗಿದೆ.

ಕೊಚ್ಚಿ ಹೋದ ನಿರ್ಮಾಣ ಹಂತದ ಸೇತುವೆ

ಸೇತುವೆ ಕೊಚ್ಚಿ ಹೋದ ಪರಿಣಾಮ ತಾವರಗೇರಾ ಮತ್ತು ದೋಟಿಹಾಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಸೇತುವೆ ಇಲ್ಲವಾದ್ದರಿಂದ ಹರಿಯುವ ನೀರಿನಲ್ಲಿಯೇ ಕುರಿಗಾಹಿಗಳು ತಮ್ಮ ಕುರಿಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆ ಕುರಿಗಳನ್ನು ದಾಟಿಸಲು ಪರದಾಡಿದರು‌.

ABOUT THE AUTHOR

...view details