ಗಂಗಾವತಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಇಂದು ತಾಲೂಕಿನ ಚಿಕ್ಕರಾಂಪೂರದಲ್ಲಿರುವ ಧಾರ್ಮಿಕ ತಾಣ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ನೂರಾರು ಕಾರ್ಯಕರ್ತರೊಂದಿಗೆ ಮೆಟ್ಟಿಲು ಸೇವೆ ಸಲ್ಲಿಸಿದರು.
ಅಂಜನಾದ್ರಿಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ: ನೂರಾರು ಕಾರ್ಯಕರ್ತರೊಂದಿಗೆ ಮೆಟ್ಟಿಲು ಸೇವೆ - Anjanadri hills
ಗಂಗಾವತಿ ತಾಲೂಕಿನ ಚಿಕ್ಕರಾಂಪೂರದಲ್ಲಿರುವ ಐತಿಹಾಸಿಕ ಧಾರ್ಮಿಕ ತಾಣ ಅಂಜನಾದ್ರಿ ಬೆಟ್ಟಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು.
ಬೆಳಗ್ಗೆ 8 ಗಂಟೆಗೆ ಆಗಮಿಸಿದ ವಿಜಯೇಂದ್ರ ಅವರನ್ನು ಸ್ವಾಗತಿಸಲು ಬೆಳಗ್ಗೆ 6 ಗಂಟೆಯಿಂದಲೇ ಕಾರ್ಯಕರ್ತರು ಹಾಗೂ ಪಕ್ಷದ ನೂರಾರು ಮುಖಂಡರು ಕಾಯ್ದು ನಿಂತಿದ್ದರು. ನಂತರ ವಿಜಯೇಂದ್ರ ಅವರಿಗೆ ಶಾಸಕ ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಮೊದಲಾದವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ದೇಗುಲದ ಪರವಾಗಿ ತಹಶೀಲ್ದಾರ್ ರೇಣುಕಾ ಅವರು ವಿಜಯೇಂದ್ರ ಅವರಿಗೆ ಶಾಲು ಹೊದಿಸಿ ಗೌರವಿಸಿದರು. ಬಳಿಕ ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ವಿಜಯೇಂದ್ರ ಅವರು ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿದರು. ನಂತರ ದೇಗುಲದ ಆಡಳಿತ ಕಚೇರಿಯಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ಚಹಾ, ಬಿಸ್ಕತ್ ಸ್ವೀಕರಿಸಿದರು.