ಗಂಗಾವತಿ:ಕುಡಚಿ ಶಾಸಕ ಪಿ. ರಾಜೀವ್ ಅವರು ಇಂದು ಪೌರತ್ವ ತಿದ್ದುಪಡಿ ಕುರಿತ ಅಭಿಯಾನದಲ್ಲಿ ಪಾಲ್ಗೊಂಡರು.
ಸಿಎಎ ಕುರಿತು ನಗರದ ಐಎಂಎ ಭವನದಲ್ಲಿ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ. ಮುಸ್ಲಿಂರಲ್ಲಿ ಗೊಂದಲ ಹುಟ್ಟುಹಾಕಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ವಿಧಾನಸಭಾ ಚುನಾವಣೆಗೆ ಮೂರುವರೆ ವರ್ಷ ಹಾಗೂ ಲೋಕಸಭೆ ಚುನಾವಣೆಗೆ ನಾಲ್ಕು ವರ್ಷ ಬಾಕಿ ಇದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ನಡುಕ ಶುರುವಾಗಿದೆ. ಹೀಗಾಗಿ ಕೇಂದ್ರದ ವಿರುದ್ಧ ಪ್ರಚಾರಕ್ಕೆ ಇಳಿದಿದೆ ಎಂದು ಆರೋಪಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಶಾಸಕ ಜಿ. ವೀರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಕಾಡಾದ ಮಾಜಿ ಅಧ್ಯಕ್ಷ ಹೆಚ್. ಗಿರೇಗೌಡ, ರೈತ ಮೋರ್ಚಾ ರಾಜ್ಯ ನಾಯಕ ತಿಪ್ಪೇರುದ್ರಸ್ವಾಮಿ ಹಾಗೂ ಕಾಶಿನಾಥ ಚಿತ್ರಗಾರ ಇದ್ದರು.