ಕುಷ್ಟಗಿ(ಕೊಪ್ಪಳ): ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಅದೃಷ್ಟವಶಾತ್ ಎರಡು ವರ್ಷದ ಮಗು ಮತ್ತು ಮಹಿಳೆ ದುರಂತದಿಂದ ಪಾರಾಗಿರುವ ಘಟನೆ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮರಕ್ಕೆ ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ
ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲೂಕು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೋಹರ್ ಪತ್ತಾರ (31) ಮೃತ ಚಾಲಕನಾಗಿದ್ದು, ಸಿಂಧನೂರು ತಾಲೂಕು ಗುಂಜಳ್ಳಿಯಿಂದ ತಾವರಗೇರಾ ಮುಲಕ ಮುದೇನೂರು ಶ್ರೀ ಯಲ್ಲಮ್ಮ ದೇವಿ ದರ್ಶನಕ್ಕೆ ತೆರಳುತ್ತಿದ್ದರು. ಜುಮ್ಲಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಗಿಡಕ್ಕೆ ಡಿಕ್ಕಿ ಹೊಡೆದಿದೆ. ಚಾಲನೆ ಮಾಡುತ್ತಿದ್ದ ಮನೋಹರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಎರಡು ವರ್ಷದ ಮಗು ಸೋನವಿ, ಮೃತನ ಸಹೋದರಿ ಆಶ್ವಿನಿ ಅವರಿಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡವರನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಪ್ರಕರಣ ತಾವರಗೇರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.