ಕರ್ನಾಟಕ

karnataka

ETV Bharat / state

ಕಾರು ಡಿಕ್ಕಿಯಾಗಿ ವ್ಯಕ್ತಿಗೆ ಗಾಯ, ಕರವೇ ಮುಖಂಡನ ಮೇಲೆ ಹಲ್ಲೆ.. - ಗಂಗಾವತಿಯ ಅಂಬೇಡ್ಕರ್ ನಗರ

ಅಪಘಾತದಲ್ಲಿ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ಆರೋಪಿಸಿ ಕರವೇ ಸ್ವಾಭಿಮಾನಿ ಬಣದ ರಾಜ್ಯ ಘಟಕದ ಅಧ್ಯಕ್ಷನ ಮೇಲೆ ಯವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

sds
ಕರವೇ ಮುಖಂಡನ ಮೇಲೆ ಹಲ್ಲೆ

By

Published : Nov 26, 2019, 2:19 PM IST

ಕೊಪ್ಪಳ:ಅತಿ ವೇಗವಾಗಿ ಕಾರು ಚಲಾಯಿಸಿ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್​ ಅಂಗಡಿ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ.

ಕರವೇ ಮುಖಂಡನ ಮೇಲೆ ಹಲ್ಲೆ..

ಗಂಗಾವತಿಯ ಅಂಬೇಡ್ಕರ್ ನಗರದಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಆಟೋ ಚಾಲಕ ಬಸವರಾಜ ದ್ಯಾವಣ್ಣ ಎಂಬುವರಿಗೆ ಗಾಯವಾಗಿದೆ. ಘಟನೆಯ ಬಗ್ಗೆ ಯುವಕರ ಗುಂಪು ಮಾತನಾಡಲು ಮುಂದಾದಾಗ ರಾಜೇಶ್​ ಅಂಗಡಿ ಪುತ್ರ ಅನಿಲ್, ಏರು ಧ್ವನಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ.ಇದರಿಂದ ರೊಚ್ಚಿಗೆದ್ದ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ವಾತಾವರಣ ತಿಳಿಗೊಳಿಸಿದ್ದು, ಅಪಘಾತದಲ್ಲಿ ಗಾಯಗೊಂಡ ಬಸವರಾಜರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾಗಿರುವ ಕರವೇ ಸ್ವಾಭಿಮಾನಿ ಬಣದ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್​ ಅಂಗಡಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ABOUT THE AUTHOR

...view details