ಗಂಗಾವತಿ:ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸುವ ಮೂಲಕ ಅಥವಾ ಗುಲಾಬಿ ಹೂವು ನೀಡುವ ಮೂಲಕ ಸಹಜವಾಗಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ಆದರೆ ನಗರದಲ್ಲಿ ಸಿನಿಮಾ ತೋರಿಸುವ ಮೂಲಕ ಮಕ್ಕಳ ದಿನಾಚರಣೆಗೆ ಚಾಲನೆ ನೀಡಲಾಯಿತು.
ಸಿನಿಮಾ ತೋರಿಸುವ ಮೂಲಕ ಗಂಗಾವತಿಯಲ್ಲಿ ಮಕ್ಕಳ ದಿನಾಚರಣೆ - ಗಂಗಾವತಿ ಸಿನಿಮಾ ತೋರಿಸುವ ಮೂಲಕ ಮಕ್ಕಳ ದಿನಾಚರಣೆ ಸುದ್ದಿ
ಮಕ್ಕಳ ದಿನಾಚರಣೆ ನಿಮಿತ್ತ ನಗರದ ಶಿವ ಚಿತ್ರಮಂದಿರಲ್ಲಿ ಮಕ್ಕಳ ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು, ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.
ಸಿನಿಮಾ ತೋರಿಸುವ ಮೂಲಕ ಮಕ್ಕಳ ದಿನಾಚರಣೆ
ಶಿಕ್ಷಣ ಇಲಾಖೆ ಆಯೋಜಿಸಿದ್ದ ಮಕ್ಕಳ ಚಿತ್ರ ಪ್ರದರ್ಶನಕ್ಕೆ ನಗರದ ಶಿವ ಚಿತ್ರಮಂದಿರದಲ್ಲಿ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು. ಸಿನಿಮಾಗಳಲ್ಲಿ ಬರುವ ಪಾತ್ರಗಳಲ್ಲಿ ಆದರ್ಶ ಗುಣಗಳನ್ನು ಮಕ್ಕಳು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಮಾತನಾಡಿ, ಸಿನಿಮಾ, ಧಾರವಾಹಿ ಅಥವಾ ಪುಸ್ತಕಗಳಲ್ಲಿ ಬರುವ ಉತ್ತಮ ಸಂದೇಶಗಳನ್ನು ಮಕ್ಕಳು ತಮ್ಮ ನಿಜ ಜೀವನದಲ್ಲಿ ಅಳವಡಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.