ಕೊಪ್ಪಳ: ಯುವರಾಜ ವಂಚನೆ ಪ್ರಕರಣ ತನಿಖೆಯಾಗುತ್ತಿದೆ. ಸೂಕ್ತ ಸಮಯದಲ್ಲಿ ಸಂಬಂಧಿಸಿದವರು ಕ್ರಮ ಕೈಗೊಳ್ಳುತ್ತಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ತಾಲೂಕಿನ ಬಸಾಪುರ ಬಳಿಯ ಖಾಸಗಿ ಏರ್ಪೋರ್ಟ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಂಚನೆ ಪ್ರಕರಣದ ಆರೋಪಿ ಯುವರಾಜ ಜೊತೆಗೆ ಬಿಜೆಪಿಯ ಹಲವು ಶಾಸಕರ ಹಾಗೂ ಸಚಿವ ವಿ ಸೋಮಣ್ಣ ಅವರ ಫೋಟೋ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ.
ಯಾರ ಜೊತೆಗೋ ಫೋಟೋ ಇದ್ದಾಕ್ಷಣ ಅಪರಾಧವಾಗೋದಿಲ್ಲ. ಏನು ಎತ್ತ ಎಂದು ಹಿನ್ನೆಲೆ ಗೊತ್ತಾಗಬೇಕು. ವಿವರವಾದ ಮಾಹಿತಿ ಸಿಕ್ಕ ಬಳಿಕ ನೋಡೋಣ. ಆ ಬಗ್ಗೆ ತನಿಖೆ ನಡೆಯುತ್ತಿದೆ. ಸಂಬಂಧಪಟ್ಟವರು ಸೂಕ್ತ ಸಂದರ್ಭದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.