ಗಂಗಾವತಿ(ಕೊಪ್ಪಳ): ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಲಕ್ಷ್ಮಿ ಕ್ಯಾಂಪಿನ ಘಂಟೆ ಆಂಜನೇಯ ದೇವಸ್ಥಾನದ ಸಮೀಪ ಈ ಘಟನೆ ನಡೆದಿದೆ. ಸಂಘಟನೆಯ ಯುವಕರು ಗುಂಪುಗೂಡುತ್ತಿದ್ದಂತೆಯೇ ವ್ಯಕ್ತಿ ನಾಪತ್ತೆಯಾಗಿದ್ದಾನೆ.
ಲಕ್ಷ್ಮಿ ಕ್ಯಾಂಪಿನ ಸರ್ಕಾರಿ ಶಾಲೆಯಲ್ಲಿ ಕೊರೊನಾ ಹಿನ್ನೆಲೆ ಹಿರಿಯರಿಗೆ ಅನುಕೂಲವಾಗಲಿ ಎಂದು ಪ್ರಾರ್ಥನೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಬಳಿಕ ಲಾಕ್ ಡೌನ್ ಸಡಿಲಿಕೆಯಾದ ಬಳಿಕ ಮಕ್ಕಳ ಶೈಕ್ಷಣಿಕ ಉದ್ದೇಶಕ್ಕೆ ಬಳಕೆಯಾಗಬೇಕಿದ್ದ ಶಾಲೆ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವುದಕ್ಕೆ ನಗರಸಭೆ ಸದಸ್ಯ ರಮೇಶ ಚೌಡ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.