ಗಂಗಾವತಿ: ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಕೋಮು ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ದೂರು ದಾಖಲಾಗಿದ್ದು, 30 ಜನರ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯಂಕಪ್ಪ ತಳವಾರ ಅವರ ಪತ್ನಿ ಹಂಪಮ್ಮ ತಳವಾರ, ತನ್ನ ಪತಿ ಮನೆಯಲ್ಲಿದ್ದಾಗ ಆರೋಪಿಗಳು ಅಕ್ರಮ ಕೂಟ ರಚಿಸಿಕೊಂಡು ಬಂದು ಹಲ್ಲೆ ಮಾಡಿ ಮಾರಣಾಂತಿಕವಾಗಿ ಗಾಯಗೊಳಿಸಿದ್ದಾರೆ. ಇದಕ್ಕೆ ಸಣ್ಣ ಹನುಮಂತ ಮರಿಯಪ್ಪ ಹರಿಜನ ಸೇರಿದಂತೆ 30 ಜನ ಕಾರಣ ಎಂದು ದೂರಿನಲ್ಲಿ ವಿವರಿಸಿದ್ದಾರೆ.