ಕೊಪ್ಪಳ: ಸರ್ಕಾರಿ ಶಾಲೆಯಲ್ಲಿದ್ದ ಕಂಪ್ಯೂಟರ್ಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಸರ್ಕಾರಿ ಪ್ರೌಢಶಾಲೆಯ ಕಂಪ್ಯೂಟರ್ ಕೊಠಡಿಯ ಬಾಗಿಲು ಮುರಿದು ಖದೀಮರು ದುಷ್ಕೃತ್ಯವೆಸಗಿದ್ದಾರೆ. ಶಾಲೆಯಲ್ಲಿದ್ದ 10 ಕಂಪ್ಯೂಟರ್, ಒಂದು ಲ್ಯಾಪ್ಟಾಪ್ ಸೇರಿ ಒಟ್ಟು 3.46 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕದ್ದೊಯ್ದಿದ್ದಾರೆ.