ಗಂಗಾವತಿ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು, ಮಸೂದೆಯ ಪ್ರತಿಗಳನ್ನು ಸುಟ್ಟು ಪ್ರತಿಭಟನೆ ನಡೆಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಪೌರತ್ವ ತಿದ್ದುಪಡಿ ಮಸೂದೆಗೆ ಖಂಡನೆ.. ಕ್ಯಾಂಪಸ್ ಫ್ರಂಟ್ನಿಂದ ಭಾರಿ ವಿರೋಧ.. - ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಗಂಗಾವತಿಯಲ್ಲಿ ಮಸೂದೆಯ ಪ್ರತಿಗಳನ್ನು ಸುಟ್ಟು ಪ್ರತಿಭಟನೆ ನಡೆಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಗೆ ಖಂಡನೆ.... ಕ್ಯಾಂಪಸ್ ಫ್ರಂಟ್ನಿಂದ ಭಾರಿ ವಿರೋಧ...
ನಗರದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಹಾಗೂ ಮುಖಂಡರು, ಕೇಂದ್ರ ಸರ್ಕಾರ ಈ ಮಸೂದೆಯ ಮೂಲಕ ಸಂವಿಧಾನದ ಕಲಂ 14(ಎ) ಉಲ್ಲಂಘಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶವಾಸಿಗಳನ್ನು ವಿಭಜಿಸುವ ಮೂಲಕ ಕೇಂದ್ರ ಸರ್ಕಾರ ಈ ದೇಶದ ಭದ್ರತೆ, ಸುರಕ್ಷತೆ ಮತ್ತು ಭವಿಷತ್ತಿನ ಮೇಲೆ ದೊಡ್ಡ ಪರಿಣಾಮಕ್ಕೆ ಯತ್ನಿಸುತ್ತಿದೆ ಎಂದು ಸಂಘಟನೆಯ ಮುಖಂಡ ಜೆ. ಭಾರದ್ವಾಜ್ ಆರೋಪಿಸಿದರು.