ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಎಸ್​ವೈ ವಿರುದ್ಧ ಪ್ರತಿಭಟನೆ

ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಇನ್ನಿಲ್ಲದ ಪ್ರಯತ್ನವನ್ನು ಯಡಿಯೂರಪ್ಪ ಮಾಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳದಲ್ಲಿ ಪ್ರತಿಭಟಿಸಿದರು.

ಪ್ರತಿಭಟನೆ

By

Published : Feb 9, 2019, 1:43 PM IST

ಕೊಪ್ಪಳ: ಶಾಸಕರನ್ನು ಖರೀದಿ ಮಾಡಿ ಯಡಿಯೂರಪ್ಪ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕೊಲೆ‌ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ

ನಗರದ ಸಾಹಿತ್ಯ ಭವನದ ಬಳಿ ಪ್ರತಿಭಟನೆ‌ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಇನ್ನಿಲ್ಲದ ಪ್ರಯತ್ನವನ್ನು ಯಡಿಯೂರಪ್ಪ ಮಾಡುತ್ತಿದ್ದಾರೆ. ಶಾಸಕರನ್ನು ಸೆಳೆಯಲು ಆಮಿಷವೊಡ್ಡುತ್ತಿದ್ದಾರೆ. ಈ ಕುರಿತ ಆಡಿಯೋ ಸಹ ಬಿಡುಗಡೆಯಾಗಿದೆ. ವಿಧಾನಸೌಧವನ್ನು ತರಕಾರಿ‌ ಮಾರುಕಟ್ಟೆ ರೀತಿಯಲ್ಲಿ ಯಡಿಯೂರಪ್ಪ ಶಾಸಕರ ಖರೀದಿಗೆ ಪ್ರಯತ್ನ ನಡೆಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕೊಲೆ ‌‌ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details