ಗಂಗಾವತಿ:2023ರ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಕಲ ಸಿದ್ಧತೆ ನಡೆಸಿದ್ದ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ರಾಮುಲು ಅವರ ಕಿರಿಯ ಪುತ್ರ ಎಚ್.ಆರ್. ಚನ್ನಕೇಶವ ಜೆಡಿಎಸ್ ಸೇರಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯಿಂದ ಜೆಡಿಎಸ್ಗೆ:2018ರಲ್ಲಿ ಬಿಜೆಪಿಯ ಟಿಕೆಟ್ ಬಯಸಿ ಪಕ್ಷದಲ್ಲಿದ್ದ ಬಳಿಕ ಸೂಕ್ತ ಸ್ಥಾನಮಾನದ ಭರವಸೆ ಈಡೇರದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಾಜಿ ಸಂಸದ ಎಚ್.ಜಿ. ರಾಮುಲು ಅವರ ಪುತ್ರ ಉದ್ಯಮಿ ಎಚ್.ಅರ್. ಚನ್ನಕೇಶವ ಇದೀಗ ಜೆಡಿಎಸ್ ಪಕ್ಷ ಸೇರಿದ್ದಾರೆ. ಅವರು ಗಂಗಾವತಿಯಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ರಾಮುಲು ಅವರ ಕಿರಿಯ ಪುತ್ರ ಎಚ್.ಆರ್. ಚನ್ನಕೇಶವ, ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ನಿಂದ ಸ್ಪರ್ಧೆ:2013ರಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದ ಎಚ್.ಆರ್. ಚನ್ನಕೇಶವ, ನಂತರ ಬಿಜೆಪಿ ಪಕ್ಷ ಸೇರ್ಪಡೆಯಾಗಿ 2014 ರ ಲೋಕಸಭಾ ಹಾಗೂ 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಹರಸಾಹಸ ನಡೆಸಿ ವಿಫಲರಾಗಿದ್ದರು. ಬಿಜೆಪಿ ಮುಖಂಡರ ರಾಜಿ ಸಂಧಾನದ ನಂತರ ಬಿಜೆಪಿಯಲ್ಲಿ ಮುಂದುವರೆದಿದ್ದರು. ಪಕ್ಷದ ಯಾವುದೇ ಕಾರ್ಯಕ್ರಮ ಹಾಗೂ ಪಕ್ಷದ ರಾಜ್ಯ ಮುಖಂಡರ ಗಂಗಾವತಿ ಕೊಪ್ಪಳ ಭೇಟಿ ಸಂದರ್ಭದಲ್ಲಿ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡರ ವರ್ತನೆಗೆ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಇಡೀ ಕ್ಷೇತ್ರದಾದ್ಯಂತ ಸಂಚಾರ ಮಾಡಿ ಸಿದ್ಧತೆ ನಡೆಸಿದ್ದರು.