ಗಂಗಾವತಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಘಟಕದಿಂದ ನಗರದಲ್ಲಿ ಎತ್ತಿನಗಾಡಿ ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ರಾಜ್ಯ, ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ - Gangavathi Congress protest
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಪ್ರತಿಭಟನೆ
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯು, ಸಿಬಿಎಸ್ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ನಡೆಯಿತು. ಬಳಿಕ ಕೃಷ್ಣದೇವರಾಯ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಯಿತು.
ಸಿಬಿಎಸ್ ವೃತ್ತದಿಂದ ಬಸವಣ್ಣ ವೃತ್ತದವರೆಗೆ ಎತ್ತಿನ ಗಾಡಿಯಲ್ಲಿ ಬಂದ ಮುಖಂಡರು ಬಳಿಕ ಅಲ್ಲಿಂದ ಪಾದಯಾತ್ರೆಯ ಮೂಲಕ ಉದ್ದೇಶಿತ ಸ್ಥಳ ತಲುಪಿದರು. ಪಾದಯಾತ್ರೆಯ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷ ಶಿವರಾಜ ತಂಗಡಗಿ ಭಾಗಿಯಾಗಿದ್ದರು.