ಕೊಪ್ಪಳ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದ ಯುವತಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ನಗರದಲ್ಲಿಂದು ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಶೋಕ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಯುಪಿಯ ಯೋಗಿ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಹಥ್ರಾಸ್ನಲ್ಲಿ ಯುವತಿಯ ಮೇಲೆ ನಡೆದ ಪೈಶಾಚಿಕ ಕೃತ್ಯ ನಿಜಕ್ಕೂ ಮನ ಕಲಕುತ್ತಿದೆ. ಅಲ್ಲಿನ ಸರ್ಕಾರ ಮಹಿಳೆಯ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ.
ಕಾಮುಕರ ಅಟ್ಟಹಾಸಕ್ಕೆ ಯುವತಿ ಬಲಿಯಾಗಿದ್ದಾಳೆ. ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್, ಶೌಚಾಲಯ ಹೀಗೆ ಅನೇಕ ವಿಷಯದಲ್ಲಿ ಉದ್ದುದ್ದ ಭಾಷಣ ಬಿಗಿಯುವ ಮೋದಿ ಸರ್ಕಾರ ಮಹಿಳೆಯರ ರಕ್ಷಣೆ ಮಾಡುವಲ್ಲಿ ಸೋತಿದೆ. ಮೋದಿ ಸರ್ಕಾರ ತೊಲಗಲಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಹಥ್ರಾಸ್ ಘಟನೆಗೆ ಕಾರಣರಾದರವ ಮೇಲೆ ಹಾಗೂ ಪ್ರಕರಣದ ಸಾಕ್ಷಿಗಳನ್ನು ನಾಶಪಡಿಸಿದ ಉತ್ತರ ಪ್ರದೇಶ ಸರ್ಕಾರದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಮಹಿಳಾ ಕಾಂಗ್ರೆಸ್ ಜಿಲಾಧ್ಯಕ್ಷೆ ಮಾಲತಿ ನಾಯಕ್, ಶೈಲಜಾ ಹಿರೇಮಠ, ನಾಗವೇಣಿ ಬಡಿಗೇರ್, ರೇಣುಕಾ ಅಹುಲ್, ರಜಿಯಾ ಮನಿಯಾರ್ ಸೇರಿದಂತೆ ಮೊದಲಾದವರು ನೇತೃತ್ವ ವಹಿಸಿದ್ದರು.
ದಲಿತ ಯುವತಿ ಅತ್ಯಾಚಾರ- ಕೊಲೆ ಖಂಡಿಸಿ ಹೊಸಪೇಟೆಯಲ್ಲಿಯೂ ಪ್ರತಿಭಟನೆ