ಕೊಪ್ಪಳ:ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳದಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಳದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ; ಪ್ರತಿಭಟನೆಗೆ ಕುದುರೆ ಬಳಸಿಕೊಂಡ ಕಾರ್ಯಕರ್ತರು - ಕೊಪ್ಪಳದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಆರೋಪಿಸಿದ ಕೊಪ್ಪಳ ಕಾಂಗ್ರೆಸ್ ಕಾರ್ಯಕರ್ತರು ಕುದುರೆಯನ್ನು ಬಳಸಿಕೊಂಡು ವಿಭಿನ್ನವಾಗಿ ಪ್ರತಿಭಟಿಸಿದರು.
ನಗರದ ಅಶೋಕ ಸರ್ಕಲ್‍ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಸೇರಿ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಧಿಕ್ಕಾರ ಹಾಕಿದರು. ಕುದುರೆಯನ್ನೂ ಬಳಸಿಕೊಂಡು ವಿಭಿನ್ನವಾಗಿ ಪ್ರತಿಭಟಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರವನ್ನು ಕೆಡವಲು ಬಿಜೆಪಿ ಕುದುರೆ ವ್ಯಾಪಾರ ನಡೆಸಿದೆ. ಆಪರೇಷನ್ ಕಮಲ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ವಿರುದ್ಧ ನಡೆದುಕೊಳ್ಳುತ್ತಿದೆ ಎಂದರು.
ಅಷ್ಟೇ ಅಲ್ಲ, ಬಿಜೆಪಿ ಆಮಿಷಗಳನ್ನು ಒಡ್ಡುವ ಮೂಲಕ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಪಕ್ಷಕ್ಕೆ ದ್ರೋಹ ಬಗೆದು ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರ ವಿರುದ್ಧವೂ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.