ಕರ್ನಾಟಕ

karnataka

ETV Bharat / state

ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಿ: ಶಾಸಕ ಪರಣ್ಣ ಮುನವಳ್ಳಿ ಕಿಡಿ - ಕಾಂಗ್ರೆಸ್ ಪಕ್ಷದ ನಗರಸಭೆಯ ಸದಸ್ಯರ ಆಕ್ಷೇಪ

ಅಭಿವೃದ್ಧಿಯ ವಿಚಾರದಲ್ಲಿ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹರಿಹಾಯ್ದಿದ್ದಾರೆ.

ಶಾಸಕ ಪರಣ್ಣ ಮುನವಳ್ಳಿ ಹೇಳಿಕೆ

By

Published : Oct 8, 2019, 9:20 PM IST

ಗಂಗಾವತಿ/ಕೊಪ್ಪಳ: ನಗರದ ಅಭಿವೃದ್ಧಿಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸುವ ಮೂಲಕ ಅಭಿವೃದ್ಧಿಗೆ ಅಡ್ಡಗಾಲಾಗಿದ್ದಾರೆ ಎಂದು ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಆಕ್ರೋಶ ವ್ಯಕ್ತಪಡಿಸಿದ್ರು.

ಶಾಸಕ ಪರಣ್ಣ ಮುನವಳ್ಳಿ ಹೇಳಿಕೆ

14ನೇ ಹಣಕಾಸು ಯೋಜನೆಯಲ್ಲಿ ಬಂದ 6.28 ಕೋಟಿ ರೂ ಮೊತ್ತದ ಅನುದಾನವನ್ನು ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್​, ಅಗತ್ಯವಿರುವ ಕಡೆ ಕಾಮಗಾರಿ ಕೈಗೊಳ್ಳಲು ಬಳಸಿಕೊಂಡಿದ್ದಾರೆ. ಎಲ್ಲಿಯೂ ತಾರತಮ್ಯ ಅನುಸರಿಸಿಲ್ಲ. ಆದರೆ ಕಾಂಗ್ರೆಸ್ ಸದಸ್ಯರು, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮಾರ್ಗದರ್ಶನದಲ್ಲಿ ಈ ಬಗ್ಗೆ ಕೋರ್ಟ್​ಗೆ ಹೋಗುವ ಮೂಲಕ ನಗರದ ಅಭಿವೃದ್ಧಿಗೆ ಅಡ್ಡಿಪಡಿಸಿದ್ದಾರೆ. ಕೋರ್ಟ್​ನಲ್ಲಿ ಈ ಬಗ್ಗೆ ವಿವರಣೆ ನೀಡುತ್ತೇವೆ ಎಂದರು.

ABOUT THE AUTHOR

...view details