ಕೊಪ್ಪಳ:ಸಂವಿಧಾನ ಬದಲಾವಣೆ ಮಾಡುವುದೇ ನಮ್ಮ ಮೂಲ ಉದ್ದೇಶ. ಅದಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಬಿಜೆಪಿಗರು ಭಾರತೀಯ ಸಂವಿಧಾನಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಾದ್ಯಂತ ಕೋಮುಗಲಭೆಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಹಿಂದೂಗಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಅವರು ಸಂವಿಧಾನ ಬದಲಾವಣೆ ಮಾಡೇ ಮಾಡುತ್ತೇವೆ ಎನ್ನುತ್ತಿದ್ದಾರೆ. ಆದರೆ ಸಂವಿಧಾನ ಉಳಿಸುವುದೇ ನಮ್ಮ ಕರ್ತವ್ಯ ಎಂದು ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.