ಗಂಗಾವತಿ :ನಗರಕ್ಕೆ ಜಿಲ್ಲಾಧಿಕಾರಿ ವಿಕಾಶ್ ಕಿಶೋರ್ ಸುರಾಳ್ಕರ್ ಭೇಟಿ ನೀಡುತ್ತಿದ್ದಾರೆ ಎಂಬ ಮಾಹಿತಿ ಲಭಿಸುತ್ತಿದ್ದಂತೆಯೇ ಗಾಂಧಿವೃತ್ತಕ್ಕೆ ದೌಡಾಯಿಸಿದ ಪೊಲೀಸರು, ಮಾಸ್ಕ್ ಇಲ್ಲದೇ ಓಡಾಡುತ್ತಿದ್ದವರ ಮೇಲೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಂಡ ಕಂಡವರ ಮೇಲೆ ದಂಡ ಪ್ರಯೋಗಕ್ಕೆ ಮುಂದಾದರು.
ಜಿಲ್ಲಾಧಿಕಾರಿ ಭೇಟಿ.. ಕಂಡ ಕಂಡವರ ಮೇಲೆ ದಂಡ ಪ್ರಯೋಗಕ್ಕೆ ಮುಂದಾದ ಪೊಲೀಸರು - ಗಂಗಾವತಿ ಸುದ್ದಿ
ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ನಿಯಂತ್ರಣಕ್ಕಾಗಿ ಕಡ್ಡಾಯವಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಹೊರಗೆ ಸಂಚರಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ..
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ, ನಿಯಂತ್ರಣಕ್ಕೆ ತರುವ ಉದ್ದೇಶಕ್ಕೆ ಕಡ್ಡಾಯವಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಹೊರಗೆ ಸಂಚರಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ, ಕಳೆದ ಎರಡು ದಿನಗಳಿಂದ ಉತ್ಸಾಹದಿಂದ ಕೆಲಸ ಮಾಡಿದ್ದ ಪೊಲೀಸರು ಕಾರ್ಯಾಚರಣೆ ಮಂದಗೊಳಿಸಿದ್ದರು.
ಆದರೆ, ಇಂದು ಜಿಲ್ಲಾಧಿಕಾರಿ ನಗರಕ್ಕೆ ಬರುತ್ತಿದ್ದಾರೆ ಎಂಬ ಮಾಹಿತಿ ಲಭಿಸುತ್ತಿದ್ದಂತೆಯೇ ಮತ್ತೆ ಗಾಂಧಿವೃತ್ತಕ್ಕೆ ದೌಡಾಯಿಸಿದ ಪೊಲೀಸರು, ಮಾಸ್ಕ್ ಇಲ್ಲದೇ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದರು.