ಕೊಪ್ಪಳ:ಕೊರೊನಾ ಜಿಲ್ಲೆಯಲ್ಲಿ ದಿನೇ ದಿನೆ ಅಬ್ಬರಿಸುತ್ತಿದ್ದು, ಇಂದು ಕಾರಟಗಿ ಪಟ್ಟಣದ 62 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಕೊಪ್ಪಳದಲ್ಲಿ ಕೊರೊನಾಗೆ ಮತ್ತೊಂದು ಬಲಿ - ಕೊಪ್ಪಳದಲ್ಲಿ ಕೊರೊನಾ
ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಕೊಪ್ಪಳದಲ್ಲಿ ಕೊರೊನಾಗೆ ಮತ್ತೊಂದು ಬಲಿ
ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತನನ್ನು ಕೊಪ್ಪಳದ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ 20 ಜನರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕದ ಜೊತೆಗೆ ಭೀತಿ ಹೆಚ್ಚಿಸಿದೆ.