ಕರ್ನಾಟಕ

karnataka

ETV Bharat / state

ಕೊರೊನಾ ಎಫೆಕ್ಟ್: ದೇವಸ್ಥಾನಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿದ ಕೊಪ್ಪಳ ಜಿಲ್ಲಾಡಳಿತ - ಶ್ರೀ ಹುಲಿಗೆಮ್ಮದೇವಿ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ

ಸದಾ ಭಕ್ತರಿಂದ ತುಂಬಿರುತ್ತಿದ್ದ ಹುಲಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನ ಹಾಗೂ ಅಂಜನಾದ್ರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

KN_KPL_01_20_PRAVESHA_NISHEDHA_VISUALS_7202284
ಕೊರೊನಾ ಎಫೆಕ್ಟ್, ದೇವಸ್ಥಾನಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿದ ಕೊಪ್ಪಳ ಜಿಲ್ಲಾಡಳಿತ..!

By

Published : Mar 20, 2020, 12:10 PM IST

ಕೊಪ್ಪಳ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಅನೇಕ ದೇವಸ್ಥಾನಗಳಿಗೆ ಜನರ ಪ್ರವೇಶ ನಿಷೇಧಿಸಲಾಗಿದ್ದು, ಸದಾ ಭಕ್ತರಿಂದ ತುಂಬಿರುತ್ತಿದ್ದ ಹುಲಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನ ಹಾಗೂ ಅಂಜನಾದ್ರಿ ದೇವಸ್ಥಾನಕ್ಕೆ ಜನರ ಪ್ರವೇಶ ನಿಷೇಧಿಸಲಾಗಿದೆ.

ಕೊರೊನಾ ಎಫೆಕ್ಟ್, ದೇವಸ್ಥಾನಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿದ ಕೊಪ್ಪಳ ಜಿಲ್ಲಾಡಳಿತ..!

ಹುಲಿಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ರಾಜ್ಯ ಸೇರಿದಂತೆ ನೆರೆರಾಜ್ಯಗಳ ಭಕ್ತರು ಆಗಮಿಸುತ್ತಾರೆ. ಈಗ ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಆದೇಶದಂತೆ ಮುಂದಿನ ಆದೇಶದವರೆಗೂ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ದೇವಸ್ಥಾನದಲ್ಲಿ ವಾಸ್ತವ್ಯಕ್ಕೆ ಇರುವ ವಸತಿ ಕೋಣೆಗಳನ್ನು ನೀಡುವುದಿಲ್ಲ. ದೇವಸ್ಥಾನಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಭಕ್ತರು ಸಹಕರಿಸುವಂತೆ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ಮನವಿ ಮಾಡಿದ್ದಾರೆ.

ABOUT THE AUTHOR

...view details