ಗಂಗಾವತಿ(ಕೊಪ್ಪಳ):ಲಾಕ್ಡೌನ್ ಸಮಯದಲ್ಲಿ ಕೊಪ್ಪಳ ಜಿಲ್ಲೆಯ ಹದಿನೈದು ಸಾವಿರಕ್ಕೂ ಅಧಿಕ ಜನರಿಗೆ ತಲಾ ಒಂದು ಸಾವಿರ ಮೌಲ್ಯದ ಆಹಾರ ಪದಾರ್ಥಗಳನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ ಹಂಚಿತ್ತು. ಈ ಹಿನ್ನೆಲೆಯಲ್ಲಿ ಸಂಸ್ಥೆಗೆ ಅಂಗನವಾಡಿ ಕಾರ್ಯಕರ್ತೆಯರು ವಿಭಿನ್ನವಾಗಿ ಧನ್ಯವಾದ ಸಲ್ಲಿಸಿದ್ದಾರೆ.
ತಾಲೂಕಿನ ಗೋನಾಳ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ 'ಥ್ಯಾಂಕ್ಸ್ ಟು ಅಜೀಂ ಪ್ರೇಮ್ಜಿ ಫೌಂಡೇಶನ್' ಎಂಬ ಇಂಗ್ಲಿಷ್ ಅಕ್ಷರಗಳ ಪ್ಲಕಾರ್ಡ್ ಹಿಡಿದು ಅಂಗನವಾಡಿ ಕಾರ್ಯಕರ್ತೆಯರು, ಜಿಲ್ಲೆಯ ಪರವಾಗಿ ಸಂಸ್ಥೆಯನ್ನು ಅಭಿನಂದಿಸಿದರು.