ಕೊಪ್ಪಳ: ಉಸಿರಾಟದ ತೊಂದರೆಯಿಂದ ಸಾವಿಗೀಡಾದ ಕನಕಗಿರಿ ತಾಲೂಕಿನ ಆದಾಪುರ ಗ್ರಾಮದ ವ್ಯಕ್ತಿಯ ಲ್ಯಾಬ್ ವರದಿ ನೆಗೆಟಿವ್ ಬಂದಿರುವುದಾಗಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಉಸಿರಾಟದ ತೊಂದರೆಯಿಂದ ಮೃತಪಟ್ಟ ವ್ಯಕ್ತಿಯ ವರದಿ ಕೊರೊನಾ ನೆಗೆಟಿವ್: ಡಿಸಿ
ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ನಿನ್ನೆ ಚಿಕಿತ್ಸೆಗಾಗಿ ಕೊಪ್ಪಳದ ಆಸ್ಪತ್ರೆಗೆ ಕರೆ ತರುವಾಗ ಕೊನೆಯುಸಿರೆಳೆದಿದ್ದರು.
ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್
ಶ್ವಾಸಕೋಶ (SARI Case) ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ನಿನ್ನೆ ಚಿಕಿತ್ಸೆಗಾಗಿ ಕೊಪ್ಪಳದ ಆಸ್ಪತ್ರೆಗೆ ಕರೆ ತರುವಾಗ ಮೃತನಾಗಿದ್ದರು. ಬಳಿಕ ಅವರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಲ್ಯಾಬೊರೇಟರಿಗೆ ಕಳುಹಿಸಲಾಗಿತ್ತು. ಈ ವರದಿ ನೆಗೆಟಿವ್ ಬಂದಿದೆ.
ನಿನ್ನೆ ರಾತ್ರಿಯವರೆಗೆ ಜಿಲ್ಲೆಯಲ್ಲಿ ಒಟ್ಟು 868 ಜನರ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ಕಳಿಸಲಾಗಿತ್ತು. ಆ ಎಲ್ಲ 868 ಜನರ ವರದಿ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.