ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ: ಕೊಪ್ಪಳದಲ್ಲಿ ಗುಣಮುಖರ ಸಂಖ್ಯೆ ಹೆಚ್ಚಳ

ಕೊಪ್ಪಳ ಜಿಲ್ಲೆಯಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್​ ಸುರಾಳ್ಕರ್ ಹೇಳಿದರು.

DC vikas kishor s
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್​ ಸುರಾಳ್ಕರ್

By

Published : Sep 12, 2020, 8:16 PM IST

ಗಂಗಾವತಿ: ಜಿಲ್ಲೆಯಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಪೈಕಿ ಶೇ.80ರಿಂದ 85ರಷ್ಟು ಜನರನ್ನು ಹೋಂ ಕ್ವಾರಂಟೈನ್ ಮಾಡುತ್ತಿದ್ದೇವೆ. ಇದು ಉತ್ತಮ ಫಲಿತಾಂಶ ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಹೇಳಿದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್​ ಸುರಾಳ್ಕರ್

ಹೆಚ್ಚಿನ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ. ಇದರಿಂದ ಬಹಳ ಒಳ್ಳೆಯ ಫಲಿತಾಂಶ ಸಿಗುತ್ತಿದೆ. ಶೇ.90ರಷ್ಟು ಗುಣಮುಖರ ಪ್ರಮಾಣ ಇದರಿಂದ ಸಿಕ್ಕಿದೆ. ಈ ಬಗ್ಗೆ ಮಾಧ್ಯಮದವರು ಹೆಚ್ಚಾಗಿ ಬೆಳಕು ಚೆಲ್ಲಿದರೆ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಳವಾಗಿದೆ. ಈ ಬಗ್ಗೆ ಜನರಲ್ಲಿ ಆತಂಕ ಉಂಟಾಗಿದೆ. ಯಾರು ಭಯಪಡುವ ಅವಶ್ಯಕತೆ ಇಲ್ಲ. ಬೇರೆ ಜಿಲ್ಲೆಗೆ ಹೋಲಿಸಿದರೇ ನಮ್ಮಲ್ಲಿ ಪರೀಕ್ಷೆ ಸಂಖ್ಯೆ ಹೆಚ್ಚಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ABOUT THE AUTHOR

...view details