ಗಂಗಾವತಿ (ಕೊಪ್ಪಳ): ಇಲ್ಲಿನ ಜಯನಗರದಲ್ಲಿರುವ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇಂದು ಮತ್ತೆರಡು ಕೊರೊನಾ ಕೇಸ್ಗಳು ಪತ್ತೆಯಾಗಿವೆ.
ಹಾಸ್ಟೆಲ್ನಲ್ಲಿರುವ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಮೊದಲು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಶನಿವಾರ ಸಂಜೆ ಪರೀಕ್ಷೆ ನಡೆಸಿದಾಗ 8 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆರಡು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಒಟ್ಟು ಹತ್ತು ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.