ಕೊಪ್ಪಳ :ಜಿಲ್ಲೆಯಲ್ಲಿ ಇಂದು 15 ಮಂದಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಸೋಂಕಿತರ ಸಂಖ್ಯೆ 446ಕ್ಕೆ ಏರಿಕೆಯಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿಂದು 15 ಮಂದಿಗೆ ಕೊರೊನಾ..34 ಜನರು ಡಿಶ್ಚಾರ್ಜ್ ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್, ಕೊಪ್ಪಳ ತಾಲೂಕಿನಲ್ಲಿ 2, ಕುಷ್ಟಗಿ ತಾಲೂಕಿನಲ್ಲಿ 2, ಯಲಬುರ್ಗಾ ತಾಲೂಕಿನಲ್ಲಿ 3 ಹಾಗೂ ಗಂಗಾವತಿ ತಾಲೂಕಿನಲ್ಲಿ 8 ಪ್ರಕರಣ ಸೇರಿ ಒಟ್ಟು 15 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈವರೆಗೆ ಒಟ್ಟು 10 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿಂದು 15 ಮಂದಿಗೆ ಕೊರೊನಾ..34 ಜನರು ಡಿಶ್ಚಾರ್ಜ್ 34 ಜನರು ಸೋಂಕಿನಿಂದ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 282 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 4 ಜನರನ್ನು ಹೋಂ ಐಸೋಲೇಷನ್ ಮಾಡಲಾಗಿದ್ದು, ಉಳಿದವರಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇನ್ನು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 18,027 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ 16,826 ಜನರ ವರದಿ ನೆಗಿಟಿವ್ ಬಂದಿದೆ. ಇನ್ನೂ 1,201 ಜನರ ವರದಿ ಬರಬೇಕಿದೆ ಎಂದರು.