ಕೊಪ್ಪಳ:ಜಿಲ್ಲೆಯ ಕುಷ್ಟಗಿ ತಾಲೂಕಿನ ವಿರುಪಾಪುರ ಗ್ರಾಮದ 20 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕುಷ್ಟಗಿ: ವಿರುಪಾಪುರ ಗ್ರಾಮದ ಯುವಕನಿಗೆ ಕೊರೊನಾ ಪಾಸಿಟಿವ್ - koppal corona case
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ವಿರುಪಾಪುರ ಗ್ರಾಮದ 20 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ.

ಕುಷ್ಟಗಿ: ವಿರುಪಾಪುರ ಗ್ರಾಮದ ಯುವಕನಿಗೆ ಕೊರೊನಾ ಪಾಸಿಟಿವ್
ಈ ಯುವಕ ಲಾಕ್ಡೌನ್ ಸಡಿಲಿಕೆ ಬಳಿಕ ಕೆಲಸ ಅರಸಿ ತುಮಕೂರು ಜಿಲ್ಲೆಗೆ ತೆರಳಿದ್ದ. ಅಲ್ಲಿನ ಕಾರ್ಮಿಕರೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ, ವಾಪಸ್ ತಮ್ಮೂರಿಗೆ ಮರಳಿದ್ದ. ಈತ ತುಮಕೂರಿನಿಂದ ಬರುವಾಗ ಹೊಸಪೇಟೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ, ಗಂಟಲು ದ್ರವದ ಮಾದರಿ ಪಡೆಯಲಾಗಿತ್ತು.
ಇದೀಗ ಯುವಕನ ವರದಿ ಪಾಸಿಟಿವ್ ಬಂದಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆ್ಯಂಬುಲೆನ್ಸ್ ಮೂಲಕ ಚಿಕಿತ್ಸೆಗೆ ಕರೆದೊಯ್ದಿದ್ದಾರೆ.