ಕೊಪ್ಪಳ: ರಾಯಚೂರು ಮೂಲದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಗೆ ಕೊರೊನಾ ದೃಢಪಟ್ಟಿದ್ದು, ಕೊಪ್ಪಳದ ಕಾರಟಗಿಯ ಪರೀಕ್ಷಾ ಕೇಂದ್ರವೊಂದರಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೀತಿ ಶುರುವಾಗಿದೆ.
ರಾಯಚೂರು ಮೂಲದ ವಿದ್ಯಾರ್ಥಿನಿಗೆ ಸೋಂಕು ದೃಢ: ಆತಂಕದಲ್ಲಿ ಕಾರಟಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು!
ಸಿಂಧನೂರು ಮೂಲದ ವಿದ್ಯಾರ್ಥಿನಿ ತನ್ನ ಚಿಕ್ಕಮ್ಮನ ಮನೆಯಿಂದ ಕಾರಟಗಿಯಲ್ಲಿನ ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದಿದ್ದಳು. ಈಗಾಗಲೇ ಮೂರು ವಿಷಯಗಳ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಇಂದು ಸಹ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಳು. ಈ ಸಂದರ್ಭದಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.
ಸಿಂಧನೂರು ಮೂಲದ ವಿದ್ಯಾರ್ಥಿನಿ ತನ್ನ ಚಿಕ್ಕಮ್ಮನ ಮನೆಯಿಂದ ಕಾರಟಗಿಯಲ್ಲಿನ ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದಿದ್ದಳು. ಈಗಾಗಲೇ ಮೂರು ವಿಷಯಗಳ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಇಂದು ಸಹ ಪರೀಕ್ಷೆ ಬರೆಯಲು ಕೇಂದ್ರಕ್ಕೆ ಬಂದಿದ್ದಳು.
ವಿದ್ಯಾರ್ಥಿನಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಿದ ನಂತರ ಆಕೆಗೆ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ ಆ ವಿದ್ಯಾರ್ಥಿನಿಯನ್ನು ರಾಯಚೂರು ಜಿಲ್ಲಾಡಳಿತ ಆ್ಯಂಬುಲೆನ್ಸ್ ಮೂಲಕ ಚಿಕಿತ್ಸೆಗೆ ಕರೆದೊಯ್ದಿದೆ. ಇದರಿಂದಾಗಿ ಸೋಂಕಿತ ವಿದ್ಯಾರ್ಥಿನಿ ಪರೀಕ್ಷೆ ಬರೆದ ಕೊಠಡಿಯಲ್ಲಿದ್ದ ಉಳಿದ 17 ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗೆ ಈಗ ಕೊರೊನಾ ಆತಂಕ ಹೆಚ್ಚಿದೆ.