ಕೊಪ್ಪಳ:ಶಂಕಿತ ಕೊರೊನಾ ವೈರಸ್ ಸೋಂಕು ಪೀಡಿತ ವ್ಯಕ್ತಿಯೊಬ್ಬ ಕೊಪ್ಪಳದಲ್ಲಿ ಪತ್ತೆಯಾಗಿದ್ದಾನೆ. ಆತನನ್ನು ಜಿಲ್ಲಾಸ್ಪತ್ರೆಯ ಕೊರೊನಾ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಕೊಪ್ಪಳದಲ್ಲಿ ಕೊರೊನಾ ಶಂಕಿತ ವ್ಯಕ್ತಿ ಪತ್ತೆ: ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ - Corona
ಕೊಪ್ಪಳದಲ್ಲಿ ಶಂಕಿತ ಕೊರೊನಾ ವೈರಸ್ ಸೋಂಕು ಪೀಡಿತ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು, ಆತನನ್ನು ಕೊಪ್ಪಳ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ
ಕಳೆದ ಫೆ.29ರಂದು ಸೌದಿ ಅರೇಬಿಯಾದಿಂದ ಹೈದರಾಬಾದ್ ಮೂಲಕ ಮೂಲಕ ಈ ವ್ಯಕ್ತಿ ಆಗಮಿಸಿದ್ದ. ಬಳಿಕ ಬಾಗಲಕೋಟೆ, ಲಿಂಗಸಗೂರು, ರಾಯಚೂರು ಭಾಗದಲ್ಲಿ ಈ ವ್ಯಕ್ತಿ ಓಡಾಡಿದ್ದಾನೆ. ಮಾರ್ಚ್ 13ರಿಂದ ಈ ವ್ಯಕ್ತಿ ಕೆಮ್ಮಿನಿಂದ ಬಳಲುತ್ತಿದ್ದು ಈಗ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆತನ ರಕ್ತದ ಮಾದರಿಯನ್ನು ಲ್ಯಾಬ್ಗೆ ಕಳಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಲ್ಯಾಬ್ ವರದಿ ಬಂದ ಬಳಿಕ ಶಂಕಿತ ವ್ಯಕಿಗೆ ಸೋಂಕು ತಗುಲಿದೆಯೋ ಇಲ್ಲವೋ ಎಂಬುದು ಗೊತ್ತಾಗಲಿದೆ.
Last Updated : Mar 18, 2020, 11:03 PM IST