ಕೊಪ್ಪಳ: ಈ ತಿಂಗಳ ಅಂತ್ಯದೊಳಗೆ ಕೊಪ್ಪಳದಲ್ಲಿ ಕೋಟಿ ರೂಪಾಯಿ ವೆಚ್ಚದಲ್ಲಿ ಕೊರೊನಾ ಪರೀಕ್ಷಾ ಲ್ಯಾಬ್ ಮತ್ತು ಸರ್ಕಾರದ ಸೂಚನೆಯಂತೆ ರ್ಯಾಪಿಡ್ ಟೆಸ್ಟಿಂಗ್ ಪ್ರಾರಂಭಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರೆಗೂ 286 ಜನರ ಪೈಕಿ 262 ಜನರ ವರದಿ ನೆಗೆಟಿವ್ ಬಂದಿವೆ. ಇನ್ನೂ 24 ಜನರ ವರದಿ ಬರಬೇಕಿದೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳನ್ನು ಅಭಿನಂದಿಸುತ್ತೇನೆ ಎಂದರು.