ಕೊಪ್ಪಳ:ಜಿಲ್ಲೆಯಲ್ಲಿ ಇಂದು 11 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13,256 ಕ್ಕೆ ಏರಿಕೆಯಾಗಿದೆ.
ಕೊಪ್ಪಳದಲ್ಲಿ 11 ಮಂದಿಗೆ ಪಾಸಿಟಿವ್: ಕೊರೊನಾ ಸೋಂಕಿತರ ಸಂಖ್ಯೆ13 ಸಾವಿರಕ್ಕೇರಿಕೆ - ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್
ಕೊಪ್ಪಳದಲ್ಲಿ ಇಂದು 11 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,256 ಕ್ಕೆ ಏರಿದೆ. ಅಂತೆಯೇ ಇಂದು 40 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 04, ಕೊಪ್ಪಳ ತಾಲೂಕಿನಲ್ಲಿ 03 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 04 ಪ್ರಕರಣ ಸೇರಿ ಇಂದು ಒಟ್ಟು 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 279 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 40 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,443 ಜನರು ಗುಣಮುಖರಾಗಿದ್ದಾರೆ. 481 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.