ಕರ್ನಾಟಕ

karnataka

ETV Bharat / state

ಸರ್ಕಾರದಿಂದ ನಿರ್ಲಕ್ಷ್ಯ ಆರೋಪ: ಗಂಗಾವತಿಯಲ್ಲಿ ಕೊರೊನಾ ವಾರಿಯರ್ಸ್ ಪ್ರತಿಭಟನೆ - ಕೊರೊನಾ ವಾರಿಯರ್ಸ್ ಪ್ರತಿಭಟನೆ

ಬಿಸಿಯೂಟದ ನೌಕರರಿಗೆ ಏಪ್ರಿಲ್ ತಿಂಗಳಿಂದ ವೇತನ ಕೊಡಬೇಕು, ಸೂಕ್ತ ಕಿಟ್ ವಿತರಿಸಬೇಕು, ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು 15 ಸಾವಿರಕ್ಕೆ ಏರಿಸಬೇಕು ಎಂದು ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

Corona Warriors protest
ಕೊರೊನಾ ವಾರಿಯರ್ಸ್ ಪ್ರತಿಭಟನೆ

By

Published : Jul 3, 2020, 6:48 PM IST

ಗಂಗಾವತಿ: ಕೊರೊನಾ ಪರಿಣಾಮದಿಂದ ಲಾಕ್​ಡೌನ್ ಉಂಟಾದ ಸಮಯದಲ್ಲಿ ಇತರೆ ಇಲಾಖೆಯ ಸಿಬ್ಬಂದಿಯೊಂದಿಗೆ ಸರಿಸಮಾನವಾಗಿ ಹೋರಾಟ ಮಾಡಿದರೂ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ನಗರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಕಾರ್ಮಿಕ ಸಂಘಟನೆ ಸಿಐಟಿಯು ನೇತೃತ್ವದಲ್ಲಿ ನಗರದ ಶ್ರೀಕೃಷ್ಣ ದೇವರಾಯ ವೃತ್ತ, ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಹಾಗೂ ಮರಳಿ ಹೋಬಳಿಯ ಅಯೋಧ್ಯೆ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದೇವೆ. ಬಾಣಂತಿ, ಗರ್ಭಿಣಿಯರು ಮತ್ತು ಮಕ್ಕಳ ಆರೈಕೆ ಮಾಡಲಾಗಿದೆ. ಆದರೂ ನಮ್ಮನ್ನು ಸರ್ಕಾರ ಸೂಕ್ತವಾಗಿ ವಾರಿಯರ್ಸ್ ರೂಪದಲ್ಲಿ ಗುರುತಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಿಸಿಯೂಟದ ನೌಕರರ ಏಪ್ರಿಲ್ ತಿಂಗಳಿಂದ ವೇತನ ಕೊಡಬೇಕು. ಸೂಕ್ತ ಕಿಟ್ ಕೊಡಬೇಕು, ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು 15 ಸಾವಿರಕ್ಕೆ ಏರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ABOUT THE AUTHOR

...view details