ಕೊಪ್ಪಳ:ಜಿಲ್ಲೆಯಲ್ಲಿಂದು 251 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 8172ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.
ಕೊಪ್ಪಳದಲ್ಲಿಂದು 251 ಮಂದಿಗೆ ಕೊರೊನಾ..198 ಜನರು ಗುಣಮುಖ - Koppal corona death
ಕೊಪ್ಪಳದಲ್ಲಿಂದು 251 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 198 ಜನರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಕೊಪ್ಪಳದಲ್ಲಿಂದು 251 ಮಂದಿಗೆ ಕೊರೊನಾ..198 ಜನರು ಗುಣಮುಖ
ಗಂಗಾವತಿ 97, ಕೊಪ್ಪಳ 73, ಕುಷ್ಟಗಿ 39 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 42 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು ನಾಲ್ವರು ಕೊರೊನಾಗೆ ಬಲಿಯಾಗಿದ್ದು, ಈವರೆಗೆ ಒಟ್ಟು 186 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 198 ಜನರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದು, ಈವರೆಗೆ ಒಟ್ಟು 6,156 ಜನರು ಗುಣಮುಖರಾಗಿದ್ದಾರೆ.
1,440 ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದ್ದು, ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.