ಕರ್ನಾಟಕ

karnataka

ETV Bharat / state

ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹೋಗಿದ್ದ ವೃದ್ದೆಗೆ ಕೊರೊನಾ - ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹೋಗಿದ್ದ ವೃದ್ದೆಗೆ ಕೊರೊನಾ

ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ತೆರಳಿದ್ದ ವೃದ್ದೆಗೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದೆ. ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡು ಬಂದಿರುವ ವಯೋವೃಧ್ಧೆಯನ್ನ ಹೋಮ್ ಐಸೋಲೇಷನ್ ಮಾಡಲಾಗಿದೆ.

Corona
ಕೊರೊನಾ

By

Published : Mar 29, 2021, 8:36 AM IST

ಕುಷ್ಟಗಿ(ಕೊಪ್ಪಳ): ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ತೆರಳಿದ್ದ ವೃದ್ದೆಗೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದೆ.

ತಾಲೂಕಿನ ಗುಡದೂರಕಲ್ ನಿವಾಸಿ 78 ವರ್ಷದ ವೃದ್ದೆ, ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಸರ್ಕಾರಿ ಆಸ್ಪತ್ರೆಗೆ ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ತೆರಳಿದ್ದರು. ಆ ವೇಳೆ ಆಸ್ಪತ್ರೆಯವರು, ಕೊರೊನಾ ಗಂಟಲು ದ್ರವ ಪರೀಕ್ಷೆ ಮಾಡಿದ್ದರಿಂದ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಓದಿ : ಎಸ್​​ಐಟಿ ಮೇಲೆ ನನಗೆ ನಂಬಿಕೆ ಇಲ್ಲ, ನ್ಯಾಯಾಂಗ ತನಿಖೆಯೇ ಆಗಬೇಕು: ಹೈಕೋರ್ಟ್ ಸಿಜೆಗೆ ಯುವತಿ ಪತ್ರ

ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡು ಬಂದಿರುವ ವಯೋವೃಧ್ಧೆಯನ್ನ ಹೋಮ್ ಐಸೋಲೇಶನ್ ಮಾಡಲಾಗಿದೆ. ಕಳೆದ ಶನಿವಾರ, ತಾವರಗೇರಾದಲ್ಲಿ 59 ವರ್ಷದ ಮಹಿಳೆಗೆ ಹಾಗೂ ತೊನ್ಸಿಹಾಳ ಗ್ರಾಮದ 16 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿದ್ದು, ಕುಷ್ಟಗಿ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details