ಕರ್ನಾಟಕ

karnataka

ETV Bharat / state

ಸೋಂಕಿತರಿಗೆ ಹೋಮ್ ಐಸೋಲೇಷನ್​ಗಿಂತ ಕೋವಿಡ್ ಕೇರ್ ಸೆಂಟರ್ ಉತ್ತಮ: ಸಚಿವ ಬಿ.ಸಿ.ಪಾಟೀಲ್​ - ಸಚಿವ ಬಿ.ಸಿ. ಪಾಟೀಲ್​

ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ಸಚಿವ ಬಿ.ಸಿ.ಪಾಟೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

Koppal
ಕೋವಿಡ್ ಕುರಿತು ಪರಿಶೀಲನೆ ಸಭೆ

By

Published : May 8, 2021, 9:26 AM IST

ಕುಷ್ಟಗಿ/ಕೊಪ್ಪಳ:ಕೋವಿಡ್ ದೃಢಪಟ್ಟ ರೋಗಿಗಳನ್ನು ಮನೆಯಲ್ಲಿಯೇ ಇರಿಸುವುದಕ್ಕಿಂತ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವುದು ಉತ್ತಮ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಯಲಬುರ್ಗಾ ಆಸ್ಪತ್ರೆಗೆ ಸಚಿವ ಬಿ.ಸಿ.ಪಾಟೀಲ್​ ಭೇಟಿ..

ಕುಷ್ಟಗಿ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಡಳಿತದ ಅಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಜತೆ ಕೋವಿಡ್-19 ಕುರಿತು ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾತ್ಕಾಲಿಕವಾಗಿ ಕೋವಿಡ್ ಕೇರ್​ ಸೆಂಟರ್ ನಿರ್ಮಿಸಲು ಸಮಸ್ಯೆಯಿಲ್ಲ. ಆದರೆ ಅದರ ನಿರ್ವಹಣೆಗೆ ಸಿಬ್ಬಂದಿ ಕೊರತೆ ಬಹುದೊಡ್ಡ ಸಮಸ್ಯೆಯಾಗಿದೆ ಎಂದರು. ಇದಕ್ಕೆ ಹನುಮಸಾಗರದ ಕೋವಿಡ್ ಕೇರ್ ಸೆಂಟರ್‌ಗೆ ಸಿಬ್ಬಂದಿಯನ್ನು ನೇಮಿಸುತ್ತೇವೆ ಎಂದು ಡಿಹೆಚ್‌ಒ ಭರವಸೆ ನೀಡಿದರು.

ಹನುಮಸಾಗರದಲ್ಲಿ‌ 30 ಬೆಡ್:

ಕುಷ್ಟಗಿ ತಾಲ್ಲೂಕಿನ ಹನುಮಸಾಗರದಲ್ಲಿ 30 ಹಾಸಿಗೆ, ತಾವರಗೇರಾದಲ್ಲಿ 30 ಹಾಸಿಗೆ ಹಾಗೂ ಕುಷ್ಟಗಿಯಲ್ಲಿ 20 ಹಾಸಿಗೆಯ ಕೋವಿಡ್ ಕೇರ್ ಸೆಂಟರ್‌ಅನ್ನು ಒಂದು ವಾರದೊಳಗೆ ತೆರೆಯಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದರಿಂದ ಮನೆಯವರಿಗೆ ಸೋಂಕು ಹರಡದಂತೆ ತಡೆಗಟ್ಟಬಹುದು ಎಂದು ತಿಳಿಸಿದರು.

ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಇದೆ. ಆದರೆ ಬಹಳ ದಿನಗಳಿಂದಲೂ ಬಳಕೆಯಾಗಿಲ್ಲ. ಅದನ್ನು ಏನಾದರೂ ಮಾಡಲು ಸಾಧ್ಯವೇ ಎನ್ನುವುದನ್ನು ನೋಡಿ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಸಲಹೆ ನೀಡಿದರು. ಇದಕ್ಕೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಪ್ರತಿಕ್ರಿಯಿಸಿ, ನಮ್ಮ ಜಿಲ್ಲಾ ಕೇಂದ್ರದ ತಂತ್ರಜ್ಞರನ್ನು ಕರೆಯಿಸಿ ದುರಸ್ತಿ ಮಾಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ತಹಶೀಲ್ದಾರ ಎಂ.ಸಿದ್ಧೇಶ್, ಗಂಗಾವತಿ ಡಿವೈಎಸ್‌ಪಿ ರುದ್ರೇಶ್ ಉಜ್ಜಿನಕೊಪ್ಪ ಉಪಸ್ಥಿತರಿದ್ದರು.

ಯಲಬುರ್ಗಾ ಆಸ್ಪತ್ರೆಗೆ ಭೇಟಿ, ಪರಿಶೀಲನೆ:

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಯಲಬುರ್ಗಾ ಪಟ್ಟಣದಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ತಾಲೂಕು ಆಡಳಿತ ಹೆಚ್ಚಿನ ನಿಗಾ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊರೊನಾ ಸೊಂಕಿತರಿಗಾಗಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಇಲ್ಲ. ಸೋಂಕು ಹರಡುವಿಕೆ ತಡಗಟ್ಟಲು ಜನರ ಸಹಕಾರದ ಅಗತ್ಯವಿದೆ. ಯಾರೂ ಸಹ ಅನವಶ್ಯಕವಾಗಿ ಮನೆಯಿಂದ ಹೊರ ಬರಬಾರದು. ನಮ್ಮ ಜಿಲ್ಲೆಯಲ್ಲಿ ಸಾಕಷ್ಟು ಉತ್ತಮ ಕೆಲಸಗಳನ್ನು ನಾವು ಮಾಡುತ್ತಿದ್ದೇವೆ. ಜನರು ಅರ್ಥ ಮಾಡಿಕೊಳ್ಳುತ್ತಿಲ್ಲ. ಜಿಲ್ಲೆಯಲ್ಲಿ ಜನತಾ ಕರ್ಪ್ಯೂ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ. ಆದ್ದರಿಂದ ಸಂಪೂರ್ಣ ಲಾಕ್​ಡೌನ್ ಮಾಡುವುದು ಒಳ್ಳೆಯದು ಎನ್ನುವದು ನಮ್ಮ ಅಭಿಪ್ರಾಯವಾಗಿದೆ ಎಂದು ಸಚಿವರು ಸಭೆಯಲ್ಲಿ ಹೇಳಿದರು.

ಕೋವಿಡ್​ ನಿಯಮ ಉಲ್ಲಂಘನೆ:

ಕುಷ್ಟಗಿ ಡೆಡಿಕೇಟ್ ಕೋವಿಡ್ ಸೆಂಟರ್ (ಡಿಸಿಹೆಚ್​ಸಿ)ಗೆ ಸಚಿವ ಬಿ.ಸಿ.ಪಾಟೀಲ್​ ಬರುತ್ತಿದ್ದಂತೆ ಮಾಧ್ಯಮದವರು‌‌ ಸೇರಿದಂತೆ ಸಾರ್ವಜನಿಕರು ಸಚಿವರನ್ನು ಸುತ್ತುವರಿದು ಸಿನಿಮಾ ನಟ ಎನ್ನುವ ಕಾರಣದಿಂದ ಸೆಲ್ಫೀಗೆ‌ ಮುಗಿಬಿದ್ದರು.

ABOUT THE AUTHOR

...view details