ಕೊಪ್ಪಳ:ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಸೋಂಕು ಹರಡುವಿಕೆ ನಿಯಂತ್ರಿಸಲು ಜನ ಸಹಕರಿಸಬೇಕು. ಗ್ರಾಮೀಣ ಮಟ್ಟದಲ್ಲಿಯೂ ಶಾಲಾ ಕಟ್ಟಡಗಳನ್ನು ಬಳಸಿಕೊಂಡು ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಡಿಸಿ , ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಮಾಡವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿಯೂ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಇದರಿಂದ ಮನೆಯಲ್ಲಿ ಪ್ರತ್ಯೇಕ ಸೌಲಭ್ಯವಿಲ್ಲದವರಿಗೆ ಸ್ಥಳೀಯರಿಗೆ ಅನುಕೂಲವಾಗಲಿದೆ. ಈಗಾಗಲೇ ಸುಮಾರು 400 ಕ್ಕೂ ಹೆಚ್ಚು ಜನರನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲಾಗಿದೆ. ಸುಮಾರು 2000 ಸೋಂಕಿತರನ್ನು ಸ್ಥಳಾಂತರುವ ಕಾರ್ಯ ನಡೆದಿದೆ.