ಕೊಪ್ಪಳ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನಗರದ ಶ್ರೀ ಗವಿಮಠದ ಹಾಸ್ಟೆಲ್ನಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಮುಂದಾಗಿದೆ. ಈ ವಿಷಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಗವಿಮಠದ ಹಾಸ್ಟೆಲ್ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಒಪ್ಪಿಗೆ - ಗವಿಮಠದ ಹಾಸ್ಟೆಲ್
ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಮಠದ ಹಾಸ್ಟೆಲ್ನಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಒಪ್ಪಿಗೆ ನೀಡಿದ್ದಾರೆ.

ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಸಂಸದರು, ಶಾಸಕರು ಶ್ರೀಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿ, ಮಠದ ಹಾಸ್ಟೆಲ್ನಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಒಪ್ಪಿಗೆ ನೀಡಿದ್ದಾರೆ. ಅಲ್ಲದೇ ಕೋವಿಡ್ ಕೇರ್ ಸೆಂಟರ್ಗೆ ಬೇಕಾದ ಎಲ್ಲ ಸೌಲಭ್ಯ, ಆಯುರ್ವೇದ ಕಾಲೇಜಿನ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಒದಗಿಸುವುದಾಗಿ ತಿಳಿಸಿದ್ದಾರೆ.
ಸಂಕಷ್ಟ ಸಂದರ್ಭದಲ್ಲಿ ಶ್ರೀಗಳು ಕೈಜೋಡಿಸಿರುವುದಕ್ಕೆ ಧನ್ಯವಾದ ಅರ್ಪಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಸಚಿವ ಬಿ.ಸಿ.ಪಾಟೀಲ್ ಬರೆದುಕೊಂಡಿದ್ದಾರೆ.