ಗಂಗಾವತಿ:ಪೌರತ್ವ ಕಾಯ್ದೆ ಹಾಗೂ ಎನ್ಆರ್ಸಿ ನಿಯಮಗಳನ್ನು ವಿರೋಧಿಸಿ ನಗರದಲ್ಲಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದ್ದಾರೆ.
ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ಕೊಪ್ಪಳದಲ್ಲಿ ಪ್ರತಿಭಟನೆ - protest against caa in gangavati
ಪೌರತ್ವ ಕಾಯ್ದೆ ಹಾಗೂ ಎನ್ಆರ್ಸಿ ನಿಯಮಗಳನ್ನು ವಿರೋಧಿಸಿ ನಗರದಲ್ಲಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದ್ದಾರೆ.
![ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ಕೊಪ್ಪಳದಲ್ಲಿ ಪ್ರತಿಭಟನೆ CPIM party protest in Koppalla against CAA and NRC](https://etvbharatimages.akamaized.net/etvbharat/prod-images/768-512-5573263-thumbnail-3x2-kpl.jpg)
ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ಕೊಪ್ಪಳದಲ್ಲಿ ಸಿಪಿಐಎಂ ಪಕ್ಷದ ಪ್ರತಿಭಟನೆ
ಕೃಷ್ಣದೇವರಾಯ ವೃತ್ತದಿಂದ ಪಾದಯಾತ್ರೆ ನಡೆಸಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಪೊಲೀಸರು ಅನುಮತಿ ನೀಡದಿದ್ದರಿಂದಾಗಿ ಪಕ್ಷದ ಕಾರ್ಯಕರ್ತರು ನೇರವಾಗಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.
ಹಿರಿಯ ಮುಖಂಡ ಶಕ್ಷಾಖಾದ್ರಿ ಮಾತನಾಡಿ, ಕೇಂದ್ರದ ಈ ನಿಯಮದಿಂದಾಗಿ ದೇಶದ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಮೇಲೆ ದೊಡ್ಡ ಪರಿಣಾಮ ಉಂಟಾಗುತ್ತದೆ. ಯಾವ ಕಾರಣಕ್ಕೂ ಈ ಕಾಯ್ದೆ ಜಾರಿಯಾಗಬಾರದು ಎಂದು ಒತ್ತಾಯಿಸಿದರು.