ಕೊಪ್ಪಳ: ಕಳೆದೆರಡು ವರ್ಷಗಳಿಂದ ಬಾಕಿ ಇರುವ ವೇತನ ಪಾವತಿಸುಂತೆ ಆಗ್ರಹಿಸಿ ಜಿಲ್ಲೆಯ ಭಾಗ್ಯನಗರ ಪಟ್ಟಣ ಪಂಚಾಯತ್ ದಿನಗೂಲಿ ನೌಕರರು ಧರಣಿ ಆರಂಭಿಸಿದ್ದಾರೆ.
ಭಾಗ್ಯನಗರ ಪಟ್ಟಣ ಪಂಚಾಯತ್ನಲ್ಲಿ ಹಲವು ವರ್ಷಗಳಿಂದ ವಾಟರ್ಮ್ಯಾನ್, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಇನ್ನಿತರೆ ಕೆಲಸಗಳನ್ನು ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ 9 ಜನರಿಗೆ ಕಳೆದ 2 ವರ್ಷಗಳಿಂದ ವೇತನ ಪಾವತಿಯಾಗಿಲ್ಲ. ಇಂದು, ನಾಳೆ ಎಂದು ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ವೇತನ ಪಾವತಿಸುವಂತೆ ಈಗಾಗಲೇ ಸಂಬಂಧಿಸಿದವರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಧರಣಿನಿರತರು ಆರೋಪಿಸಿದ್ದಾರೆ.