ಕರ್ನಾಟಕ

karnataka

By

Published : Dec 6, 2019, 11:41 AM IST

ETV Bharat / state

ಇನ್ಮುಂದೆ ಅಂಜನಾದ್ರಿ ಬೆಟ್ಟಕ್ಕೆ ಪ್ಲಾಸ್ಟಿಕ್​​ ನೋ ಎಂಟ್ರಿ!

ಧಾರ್ಮಿಕ ಪುಣ್ಯಸ್ಥಳವಾದ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾದ ಕಾರಣ ದೇವಾಲಯದಲ್ಲಿ ಪ್ಲಾಸ್ಟಿಕ್ ಬಳಕೆಯೂ ಹೆಚ್ಚಾಗುತ್ತಿದೆ. ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅಂಜನಾದ್ರಿ ಬೆಟ್ಟ
Anjanadri hill

ಗಂಗಾವತಿ:ಪೌರಾಣಿಕ ಕ್ಷೇತ್ರ ಹಾಗೂ ಧಾರ್ಮಿಕ ಪುಣ್ಯಸ್ಥಳವಾದ ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯನ ದೇವಾಲಯ ಹಾಗೂ ಸುತ್ತಲಿನ ಪರಿಸರದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್​ ಆದೇಶ ಹೊರಡಿಸಿದ್ದಾರೆ.

ಅಂಜನಾದ್ರಿ ಬೆಟ್ಟಕ್ಕೆ ಪ್ಲಾಸ್ಟಿಕ್​​ ಬ್ಯಾನ್​..

ಕಳೆದ ಒಂದೂವರೆ ವರ್ಷದ ಹಿಂದೆ ದೇಗುಲ ಕಂದಾಯ ಇಲಾಖೆಗೆ ಒಳಪಟ್ಟಿತ್ತು. ಆ ನಂತರ ದೇಗುಲಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಭಿವೃದ್ಧಿಯೂ ನಿರೀಕ್ಷಿತ ಪ್ರಮಾಣಕ್ಕಿಂತ ವೇಗವಾಗಿ ನಡೆಯುತ್ತಿದೆ.

ಭಕ್ತರ ಸಂಖ್ಯೆಯಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಪ್ಲಾಸ್ಟಿಕ್ ಬಳಕೆಯೂ ಹೆಚ್ಚಾಗುತ್ತಿದೆ. ಇದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details