ಕರ್ನಾಟಕ

karnataka

ETV Bharat / state

ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ: ಸಿಬ್ಬಂದಿಯನ್ನು ಹುರಿದುಂಬಿಸಿದ ಡಿಸಿ - ಗಂಗಾವತಿ ಉಪವಿಭಾಗ ಸರ್ಕಾರಿ ಆಸ್ಪತ್ರೆ

ಸತತ ಎರಡನೇ ಬಾರಿಗೆ ಕೇಂದ್ರ ಆರೋಗ್ಯ ಸಚಿವಾಲಯ ನೀಡುವ ಕಾಯಕಲ್ಪ ಪ್ರಶಸ್ತಿಯನ್ನ ನಗರದ ಉಪ ವಿಭಾಗ ಸರ್ಕಾರಿ ಆಸ್ಪತ್ರೆ ಪಡೆದುಕೊಂಡ ಹಿನ್ನೆಲೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್​ ಭೇಟಿ ನೀಡಿ ಸಿಬ್ಬಂದಿಯನ್ನು ಹುರಿದುಂಬಿಸಿದರು.

ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ..ಸಿಬ್ಬಂದಿ ಹುರಿದುಂಬಿಸಿದ ಜಿಲ್ಲಾಧಿಕಾರಿ

By

Published : Nov 3, 2019, 12:33 PM IST

ಗಂಗಾವತಿ:ಸತತ ಎರಡನೇ ಬಾರಿಗೆ ಕೇಂದ್ರ ಆರೋಗ್ಯ ಸಚಿವಾಲಯ ನೀಡುವ ಕಾಯಕಲ್ಪ ಪ್ರಶಸ್ತಿಯನ್ನ ನಗರದ ಉಪ ವಿಭಾಗ ಸರ್ಕಾರಿ ಆಸ್ಪತ್ರೆ ಪಡೆದುಕೊಂಡ ಹಿನ್ನೆಲೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್​ ಭೇಟಿ ನೀಡಿ ಸಿಬ್ಬಂದಿಯನ್ನು ಹುರಿದುಂಬಿಸಿದರು.

ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ, ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಒಳರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲವರು ಸ್ವಚ್ಛತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ರು. ಬಳಿಕ ಸ್ಥಳಕ್ಕೆ ಆಡಳಿತ ವೈದ್ಯಾಧಿಕಾರಿಯನ್ನು ಕರೆಸಿಕೊಂಡ ಜಿಲ್ಲಾಧಿಕಾರಿ, ಈ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದ್ರು.

ಬಳಿಕ ಆಸ್ಪತ್ರೆಯ ವಿವಿಧ ವಿಭಾಗದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಯನ್ನ ಸನ್ಮಾನಿಸಲಾಯಿತು.

ABOUT THE AUTHOR

...view details