ಗಂಗಾವತಿ:ಅಕ್ರಮ ಮರಳು ಸಾಗಾಣಿಕೆದಾರರಿಗೆ ಬೇಡಿಕೆ ಇಟ್ಟು ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ರೇಣುಕಾ ಅವರ ಮೇಲೆ ಚಾರ್ಜ್ಶೀಟ್ ಫೈಲ್ ಮಾಡಿ ಸರ್ಕಾರಕ್ಕೆ ವರದಿ ಕಳಿಸಲಾಗಿದ್ದು, ಮುಂದಿನ ಕ್ರಮಕ್ಕೆ ಕಾಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.
ತಹಶೀಲ್ದಾರ್ ಲಂಚ ಪಡೆದ ಪ್ರಕರಣ.. ತಪ್ಪಿತಸ್ಥರನ್ನು ಬಿಡಲ್ಲ ಎಂದ ಡಿಸಿ - ತಹಶೀಲ್ದಾರ್ ಲಂಚ ಪಡೆದ ಪ್ರಕರಣ
ಗಂಗಾವತಿಯ ತಹಶೀಲ್ದಾರ್ ರೇಣುಕಾ ಎಂಬುವರು ಅಕ್ರಮ ಮರಳು ಸಾಗಾಣಿಕೆದಾರರಿಂದ ಬೇಡಿಕೆ ಇಟ್ಟು ಲಂಚ ಸ್ವೀಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪ್ರತಿಕ್ರಿಯೆ ನೀಡಿದ್ದು, ಈ ಕುರಿತಂತೆ ಸರ್ಕಾರದ ಅಪರ ಕಾರ್ಯದರ್ಶಿ ಗಮನಕ್ಕೆ ತರಲಾಗುವುದು ಎಂದರು.

DC Vikas Kishor Suralkar reacted Tehsildar Bribery case
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಪ್ರತಿಕ್ರಿಯೆ
ಪ್ರಕರಣ ನಡೆದು ಸುಮಾರು ಒಂದೂವರೆ ತಿಂಗಳಾಗುತ್ತಾ ಬಂದರೂ ತಹಶೀಲ್ದಾರ್ ಮೇಲೆ ಯಾವುದೇ ಶಿಸ್ತುಕ್ರಮ ಕೈಗೊಳ್ಳದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ, ಈಗಾಗಲೇ ಸರ್ಕಾರಕ್ಕೆ ವರದಿ ಮಾಡಲಾಗಿದೆ. ಎರಡು-ಮೂರು ಬಾರಿ ಪತ್ರ ವ್ಯವಹಾರ ಮಾಡಲಾಗಿದೆ. ಮತ್ತೊಮ್ಮೆ ಸರ್ಕಾರದ ಅಪರ ಕಾರ್ಯದರ್ಶಿ ಗಮನಕ್ಕೆ ತರಲಾಗುವುದು. ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.