ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್​ ಓಡಿಸಲು ಸೂಚನೆ: ಕೊಪ್ಪಳ ಡಿಸಿ - DC Vikas Kishore Suralkar reaction

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಸುಮಾರು 10 -12 ಕಡೆ ಕೋರಿಕೆಯ ಮೇರೆಗೆ ಬಸ್ ಸಂಚಾರ ವ್ಯವಸ್ಥೆ ಮಾಡಿಸಲಾಗಿದೆ ಎಂದು ಡಿಸಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

DC Vikas Kishore Suralkar
ಡಿಸಿ ವಿಕಾಸ್ ಕಿಶೋರ್ ಸುರಳ್ಕರ್

By

Published : Feb 24, 2021, 11:50 AM IST

ಕೊಪ್ಪಳ: ಜಿಲ್ಲೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್​ಗಳನ್ನು ಓಡಿಸುವಂತೆ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಕೊಪ್ಪಳ ವಿಭಾಗದ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

ಸರಿಯಾದ ಬಸ್ ಸೌಲಭ್ಯವಿಲ್ಲದೇ ಜಿಲ್ಲೆಯ ಅನೇಕ ಗ್ರಾಮಗಳ ವಿದ್ಯಾರ್ಥಿಗಳು ಪರದಾಡುತ್ತಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಡಿಸಿ ವಿಕಾಸ್ ಕಿಶೋರ್ ಸುರಳ್ಕರ್ , ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಸುಮಾರು 10-12 ಕಡೆ ಕೋರಿಕೆಯ ಮೇರೆಗೆ ಬಸ್ ಸಂಚಾರ ವ್ಯವಸ್ಥೆ ಮಾಡಿಸಲಾಗಿದೆ ಎಂದರು.

ಬಸ್ ಸಂಚಾರದ ಸಮಸ್ಯೆ ಇರುವ ಕುರಿತಂತೆ ನನ್ನ ಗಮನಕ್ಕೆ ತನ್ನಿ. ಆ ಕುರಿತಂತೆ ಸಾರಿಗೆ ಸಂಸ್ಥೆಯ ನಿಯಂತ್ರಣಾಧಿಕಾರಿಗಳ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರಿಯಾದ ಸಮಯಕ್ಕೆ ಬಸ್ ಸಂಚಾರ ಆರಂಭಿಸಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ABOUT THE AUTHOR

...view details