ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಡಿಸಿಎಂ ಸವದಿ - DCM Laxman Savadi meeting with officials at Koppal

ಕೊರೊನಾ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತಂತೆ ಹಾಗೂ ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು.

ಅಧಿಕಾರಿಗಳೊಂದಿಗೆ ಡಿಸಿಎಂ ಲಕ್ಷ್ಮಣ ಸವದಿ ಸಭೆ
ಅಧಿಕಾರಿಗಳೊಂದಿಗೆ ಡಿಸಿಎಂ ಲಕ್ಷ್ಮಣ ಸವದಿ ಸಭೆ

By

Published : Apr 7, 2020, 4:42 PM IST

ಕೊಪ್ಪಳ: ಜಿಲ್ಲಾ ಉಸ್ತುವಾರಿ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಅವರು, ಕೊರೊನಾ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತಂತೆ ಹಾಗೂ ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಕೊರೊನಾ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಸೇರಿದಂತೆ ಅಧಿಕಾರಿಗಳು ಮಾಹಿತಿ ನೀಡಿದರು.

ಸಂಸದ ಸಂಗಣ್ಣ ಕರಡಿ, ಶಾಸಕರಾದ ಅಮರೇಗೌಡ ಪಾಟೀಲ್ ಭಯ್ಯಾಪುರ, ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಕೆ.ರಾಘವೇಂದ್ರ ಹಿಟ್ನಾಳ್ ಹಾಗೂ ಬಸವರಾಜ ದಡೇಸಗೂರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿದರು.

For All Latest Updates

ABOUT THE AUTHOR

...view details