ಗಂಗಾವತಿ: ಅನ್ನಭಾಗ್ಯ ಯೋಜನೆಯಡಿ ಬಡವರ ಹೊಟ್ಟೆ ತುಂಬಿಸಬೇಕಿದ್ದ ಅಕ್ಕಿಯನ್ನು ಕೆಲ ವ್ಯಕ್ತಿಗಳು, ಅಕ್ರಮವಾಗಿ ಕಾಳಸಂತೆಗೆ ಸಾಗಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ಕಾಳಸಂತೆಗೆ ಅನ್ನಭಾಗ್ಯ ಅಕ್ಕಿ : ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ - ration
ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಗೆ ಸಾಗಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಈಗ ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಗಾಯಗೊಂಡ ಯುವಕನನ್ನು ಫಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತ ಪ್ರಶಾಂತನಗರದ ನಿವಾಸಿ ಯಾಸೀನ್ (25) ಎಂದು ಗುರುತಿಸಲಾಗಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ನಿವಾಸದ ಸಮೀಪ ಈ ಘಟನೆ ನಡೆದಿದೆ.
ವಡ್ಡರಹಟ್ಟಿಯಿಂದ ಅಕ್ರಮವಾಗಿ ವಾಹನದಲ್ಲಿ ಪಡಿತರ ಅಕ್ಕಿಯನ್ನು ನಗರದ ಚಂದ್ರಹಾಸ ಚಿತ್ರಮಂದಿರ ಸಮೀಪದ ರಾಜಾಜೀನಗರಕ್ಕೆ ಸಾಗಿಸಲಾಗುತಿತ್ತು ಎಂಬ ಸುಳಿವಿನ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಯುವಕ, ಈ ಬಗ್ಗೆ ಪ್ರಶ್ನಿಸಿದ್ದಾನೆ.ಇದರಿಂದ ಕುಪಿತಗೊಂಡ ಇಬ್ಬರು ವ್ಯಕ್ತಿಗಳು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕ ಇದೀಗ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.